ಬೆಳಗಾವಿಯಲ್ಲಿ VHP ಪ್ರತಿಭಟನೆ
ವಿಎಚ್ ಪಿ ಪ್ರತಿಭಟನೆ: ಸ್ವಾಮೀಜಿ ಬಿಡುಗಡೆ ಆಗ್ರಹ ಬೆಳಗಾವಿ: ಬಾಂಗ್ಲಾದೇಶದ ಸರ್ಕಾರ ಇಸ್ಕಾನ್ ಮಂದಿರದ ಚಿನ್ಮಯ್ ಕೃಷ್ಣದಾಸ್ ಶ್ರೀಗಳನ್ನು ಬಂಧಿಸಿರುವ ಕ್ರಮ ಖಂಡಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಇಲ್ಲಿನ ಚೆನ್ನಮ್ಮ ಸರ್ಕಲ್ ನಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಮುಖಂಡರು, ಕಾರ್ಯಕರ್ತರು, ಬಾಂಗ್ಲಾ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ…