ಬೆಳಗಾವಿ
ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಗುಮಾಸ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ರದ್ರಣ್ಣ ಯಡವಣ್ಣವರ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ತಹಶಿಲ್ದಾರರ ಕಚೇರಿಯಲ್ಲಿಯೇ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬ್ಬಂದಿಗಳು ದೂರಿದ್ದಾರೆ.

ಈ ಆತ್ಮಹತ್ಯೆ ಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಆದರೆ ಒಬ್ಬ ಪ್ರಭಾವಿ ಸಚಿವರ ಆಪ್ರ ಎಂದು ಕರೆಯಿಸಿಕೊಳ್ಳುವ ಸೋ… ಎಂಬುವರೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ರುದ್ರಣ್ಣ ಅವರಿಗೆ ಬೆಳಗಾವಿ ತಹಶಿಲ್ದಾರರ ಕಚೇರಿಯಿಂದ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಅಡಳಿತ ಮಂಡಳಿಗೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದರು. ತನ್ನ ವರ್ಗಾವಣೆ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿಯೂ ರುದ್ರಣ್ಣ ಬರೆದುಕೊಂಡು ತಹಶಿಲ್ದಾರರ ಕಚೇರಿಯ ವಾಟ್ಸಪ್ ಗ್ರೂಪ್ ನಲ್ಲಿಯೂ ಚರ್ಚೆ ನಡೆಸಿ ಬಳಿಕ ಅದನ್ನು ಡಿಲಿಟ್ ಮಾಡಿದ್ದ ಎನ್ನುವ ಮಾಹಿತಿ ಇದೆ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೂಲಗಳ ಪ್ರಕಾರ ಸಚಿವರ ಆಪ್ತ ಕಾರಣ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಗೊತ್ತಾಗಿದೆ