Headlines

ಸ್ಥಿರ ಸರ್ಕಾರಕ್ಕೆ ಬಿಜೆಪಿ ಬೆಂಬಲಿಸಿ

ಬೆಳಗಾವಿ.

ಇಡಿ ದೇಶದ ಜನ ಮಹಾರಾಷ್ಟ್ರ ರಾಜ್ಯದ ಚುನಾವಣೆಯನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತಿದ್ದು ಸ್ಥಿರ ಸರ್ಕಾರಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ನೆರೆಯ ಮಹಾರಾಷ್ಟ್ರ ರಾಜ್ಯದ ವಿಧಾನಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಸೋಲ್ಲಾಪುರ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಲಿಂಗಾಯತರು ಹಾಗೂ ಕನ್ನಡ ಭಾಷಿಕ ಪ್ರದೇಶಗಳಲ್ಲಿ ಮಾಜಿ ಸಹಕಾರ ಸಚಿವ ಸುಭಾಸ ದೇಶಮುಖ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು ಹಾಗೂ ಸೋಲ್ಲಾಪುರ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ದೇವೇಂದ್ರ ಕೋಠೆ ಅವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಮಹಾರಾಷ್ಟ್ರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಬೇಕು ಈ ಹಿನ್ನಲೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರು ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಅತೀ ಹೆಚ್ಚು ಬಹುಮತದಿಂದ ಗೆಲ್ಲಲು ಪರಿಶ್ರಮ ಹಾಕಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು.

ಪಶ್ಚಿಮ ಮಹಾರಾಷ್ಟ್ರ ಭಾಗದ ಸೋಲ್ಲಾಪೂರ ಹಾಗೂ ದಾರಾಶಿವ ಎರಡು ಜಿಲ್ಲೆಗಳ 8 ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ಹೊತ್ತು ಸಂಸದ ಈರಣ್ಣ ಕಡಾಡಿ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!