
ಸರಕಾರದ ಗಮನಸೆಳೆದ ಮಾದರಿ ಯೋಜನೆ
ಸಿಇಟಿ ಸಕ್ಷಮ್”ಕ್ಕೆ 10 ಲಕ್ಷ ರೂಪಾಯಿ ಅನುದಾನ “ ಬೆಳಗಾವಿ, ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ “ಸಿ.ಇ.ಟಿ.-ಸಕ್ಷಮ್” ಎಂಬ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಮೆಚ್ಚುಗೆ ಜತೆಗೆ ಚಾಲೆಂಜ್ ಫಂಡ್ ಯೋಜನೆಯಡಿ ಹತ್ತು ಲಕ್ಷ ರೂಪಾಯಿ ಅನುದಾನ ಕೂಡ ಲಭಿಸಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ…