ನವದೆಹಲಿ : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿ ಮನವಿ ಸಲ್ಲಿಸಿದ್ದಾರೆ.


ದೆಹಲಿಯಲ್ಲಿ ಪ್ರಧಾನಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ‘ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ನೀಡಿದರು.