Headlines

ಗಡಿ`ಮಹಾ’ ಕ್ಷೇತ್ರದಲ್ಲಿ ಕಮಲ‌ ಅರಳಿಸಿದ ಅಭಯ

ಬೆಳಗಾವಿಗರು ಕಾಲಿಟ್ಟಲೆಲ್ಲ ಗೆಲುವು’ಗಡಿ`ಮಹಾ’ ಕ್ಷೇತ್ರದಲ್ಲಿ ಅರಳಿದ ಕಮಲಬೆಳಗಾವಿ. ಇಲ್ಲಿ ಉಳಿದ ವಿಷಯ ಏನೇ ಇರಲಿ. ಪಕ್ಷ ನಿಷ್ಠೆ ಮತ್ತು ಸಂಘಟನೆ ವಿಷಯದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಇಟ್ಟ ಹೆಜ್ಜೆ ಹಿಂದೆ ಇಟ್ಟ ಉದಾಹರಣೆ ಇಲ್ಲ. ಅಷ್ಟೇ ಅಲ ಪಕ್ಷದ ವಿಷಯದಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡ ಉದಾಹರಣೆ ಇಲ್ಲ.ಮತ್ತೊಂದು ಸಂಗತಿ ಎಂದರೆ, ಪಕ್ಷದ ವರಿಷ್ಠರು ಕೊಟ್ಡ ಜವಾಬ್ದಾರಿಯನ್ನು ಸಮರ್ಥವಾಗಿ ಇಲ್ಲಿಯವರೆಗೆ ನಿಭಾಯಿಸಿಕೊಂಡು ಬಂದ ಹೆಗ್ಗಳಿಕೆ ಅಭಯ ಪಾಟೀಲರಿಗಿದೆ. ಹೈಕಮಾಂಡ ಇವರ ಸಂಘಟನೆಯನ್ನು ಗಮನದಲ್ಲಿರಿಸಿಕೊಂಡು ಹಿಂದೆ…

Read More

ಸಚಿವ ಸತೀಶಗೆ ಡಬಲ್ ಪ್ರಮೋಶನ್..!

ಸರ್ವರ ಒಗ್ಗಟ್ಟಿನಿಂದಲೇ ಮೂರು ಕ್ಷೇತ್ರಗಳಲ್ಲಿ ಗೆಲುವು: ಸಚಿವ ಸತೀಶ್ ಜಾರಕಿಹೊಳಿ ಶಿಗ್ಗಾಂವಿ ಅಭ್ಯರ್ಥಿ ಗೆಲ್ಲಿಸಿದ್ದರಿಂದ ಡಬಲ್‌ ಪ್ರಮೋಶನ್‌- ಅಹಿಂದ ಮತಗಳನ್ನು ಒಗ್ಗೂಡಿಸಿದ್ದರಿಂದ ಜಯ ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಸಾಧಿಸಿದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್‌ ಕಚೇರಿಯಲ್ಲಿ…

Read More

ಎಲ್ಲೆಡೆ ಗೆಲ್ಲೋದು ನಾವೇ- ಬೊಮ್ಮಾಯಿ

ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುತ್ತಾರೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಮೂರು ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಜನರಿಂದ ವ್ಯಕ್ತವಾದ ಬೆಂಬಲದಿಂದ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ತಾರೆ ಅನ್ನುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಉಪ ಚುನಾವಣೆ ನಡೆದ ಮೂರು…

Read More

ಕನ್ನಡಾಭಿಮಾನ ಬೆಳೆಸಲು ಬಾಲಚಂದ್ರ ಕರೆ

ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿದರೆ ಖಂಡಿತವಾಗಿಯೂ ಜಾಗತಿಕ ಮಟ್ಟದಲ್ಲಿ ಮುಂದೆ ಬರಲು…

Read More

ಬ್ರಾಹ್ಮಣ ಸಮಾವೇಶ ಸಮಿತಿ ಉಪಾಧ್ಯಕ್ಷರ ನೇಮಕ

ಅಶೋಕ ಹಾರನಹಳ್ಳಿ ಸಾರಥ್ಯದಲ್ಲಿ ನಡೆಯಲಿರುವ ಸಮಾವೇಶ. ರಾಜ್ಯದ ಎಲ್ಲ ಮಠಗಳ ಶ್ರೀಗಳು ಭಾಗಿ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನೆವರಿ 18, 19 ರಂದು ನಡೆಯುವ ಸಮಾವೇಶ. ಬೆಳಗಾವಿ.ಜನವೇರಿ 18 ಮತ್ತು 19 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಖಿಲ ಕನರ್ಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಮುಂದಾಳತ್ವದಲ್ಲಿ ನಡೆಯುವ ರಾಜ್ಯ ಮಟ್ಟದ ಬ್ರಾಹ್ಮಣರ ಸಮಾವೇಶಕ್ಕೆ ಭರ್ಜರಿ ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಸಂಘಟನೆ ದೃಷ್ಟಿಯಿಂದ ಗಡಿಜಿಲ್ಲೆ ಬೆಳಗಾವಿಯಲ್ಲಿಯೂ ಕೂಡ ಸಮಾವೇಶದ ಜವಾಬ್ದಾರಿ…

Read More

ಇದು ಸಿದ್ದುನ ಕೊನೆಯ ಅಧಿವೇಶನ…!

ಬೆಳಗಾವಿ ಚಳಿಗಾಲ ಅಧಿವೇಶನವೇಸಿಎಂ ಸಿದ್ಧರಾಮಯ್ಯರ ಕೊನೆ ಅಧಿವೇಶನ ಬೆಳಗಾವಿ: ಡಿಸೆಂಬರ್ ನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊನೆಯ ಅಧಿವೇಶನವಾಗಲಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಂದನೇ ಆರೋಪಿ ಸ್ಥಾನದಲ್ಲಿದ್ದಾರೆ. ಹೀಗಾಗಿ, ಬೆಳಗಾವಿ ಅಧಿವೇಶನವೇ ಕೊನೆಯಾಗಲಿದೆ.ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹರಾಜಿಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಗೊತ್ತಿಲ್ಲ‌ ಎಂದು ವ್ಯಂಗ್ಯವಾಡಿದರು.ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಹೆಣಗಾಡುತ್ತಿರುವ…

Read More

ಪೊಕ್ಸೊ- 20 ವರ್ಷ ಶಿಕ್ಷೆ

ಬೆಳಗಾವಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವುದಾಗಿ ಪುಸಲಾಐಇಸಿ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ ೨೦ ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.೨೦೨೧ರಲ್ಲಿ ಸವದತ್ತಿ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಬಾಲಕಿಯ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸವದತ್ತಿ ಪೊಲೀಸರು ಮಂಗಳೂರಿನಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿ ತಂದು ಪೋಷಕರ ಮಡಿಲಿಗೆ ಒಪ್ಪಿಸಿದ್ದರು. ಪ್ರಕರಣದ…

Read More

ಅಧಿವೇಶನಕ್ಕೆ ಸಕಲ ಸಿದ್ಧತೆ- ಸಚಿವ ಸತೀಶ್

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಕಲ ಸಿದ್ಧತೆ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಡಿ.9 ರಿಂದ 20ರವರೆಗೆ ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಈ ಅಧಿವೇಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂದಾನಗರಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ಹಾಗೂ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕಾ‌ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಅಗಮಿಸುತ್ತಿರುವ ಹಿನ್ನಲೆಯಲ್ಲಿ ಪೇಟಿಂಗ್‌ ಹಾಗೂ ಕ್ಲಿನಿಂಗ್‌ ಗೆ ಹೆಚ್ಚು…

Read More

8 ಲಕ್ಷ ರೂ ಪರಿಹಾರ ವಿತರಣೆ

ಘಟಪ್ರಭಾ ನದಿಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಸತೀಶ್‌ ಜಾರಕಿಹೊಳಿ *ಮೃತನ ಪತ್ನಿಗೆ ಮೀನುಗಾರಿಕೆ ಸಂಕಷ್ಟ ಪರಿಹಾರ ನಿಧಿಯಿಂದ 8 ಲಕ್ಷ ರೂಗಳ ಪರಿಹಾರ ನಿಧಿಯ ಆದೇಶ ಪತ್ರ ವಿತರಣೆ ಹುಕ್ಕೇರಿ: ಮೀನುಗಾರಿಕೆ ಕೃಷಿಗೆ ತೆರಳಿದ್ದ ವೇಳೆ ಘಟಪ್ರಭಾ ನದಿಯಲ್ಲಿ ಮುಳುಗಿ ಮೃತಪಟ್ಟ ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ತಾಲೂಕಿನ ಘಟಪ್ರಭಾ ನದಿಯಲ್ಲಿ…

Read More

ಸ್ಥಿರ ಸರ್ಕಾರಕ್ಕೆ ಬಿಜೆಪಿ ಬೆಂಬಲಿಸಿ

ಬೆಳಗಾವಿ. ಇಡಿ ದೇಶದ ಜನ ಮಹಾರಾಷ್ಟ್ರ ರಾಜ್ಯದ ಚುನಾವಣೆಯನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತಿದ್ದು ಸ್ಥಿರ ಸರ್ಕಾರಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ನೆರೆಯ ಮಹಾರಾಷ್ಟ್ರ ರಾಜ್ಯದ ವಿಧಾನಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಸೋಲ್ಲಾಪುರ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಲಿಂಗಾಯತರು ಹಾಗೂ ಕನ್ನಡ ಭಾಷಿಕ ಪ್ರದೇಶಗಳಲ್ಲಿ ಮಾಜಿ ಸಹಕಾರ ಸಚಿವ ಸುಭಾಸ ದೇಶಮುಖ ಅವರ ಪರವಾಗಿ ಬಿರುಸಿನ…

Read More
error: Content is protected !!