Headlines

ಸುವರ್ಣ ಸೌಧಕ್ಕೆ ಮುತ್ತಿಗೆ ಪಕ್ಕಾ

ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ನಿಶ್ಚಿತ:
ಬಸವಜಯ ಮೃತ್ಯುಂಜಯ ಶ್ರೀ

ಬೆಳಗಾವಿ: ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದು ಖಚಿತ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.


ನಗರದಲ್ಲಿ ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.9ರಿಂದ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಡಿ.10ರಂದು ಎಷ್ಟೇ ವಿರೋಧ ವ್ಯಕ್ತವಾದರೂ ಕೂಡ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿಯೇ ಹಾಕಲಾಗುವುದು ಎಂದರು.

ನಮ್ಮಲ್ಲಿ ಯಾವುದೇ ಮತಭೇದಗಳಿಲ್ಲ. ಸಮಾಜದ 2ಎ ಮೀಸಲಾತಿಗೆ ಒತ್ತಾಯಿಸಿ ಹಲವು ಹಂತಗಳಲ್ಲಿ ಹೋರಾಟ ಮಾಡಿದ್ಧೇವೆ. ಮುಂದೆಯೂ ಮಾಡುತ್ತೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದೇ ಇರುವ ಕಾರಣ ಮುತ್ತಿಗೆಗೆ ನಿರ್ಧರಿಸಲಾಗಿದೆ ಎಂದು ಶ್ರೀಗಳು ಹೇಳಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಮ್ಮೊಂದಿಗೆ ಸಭೆ ಮಾಡಿದಾಗ ನಮ್ಮ ಬೇಡಿಕೆಗೆ ಸ್ಪಂದಿಸುವ ಭರವಸೆಯಿತ್ತು. ಆದರೆ, ಅವರು ನಮ್ಮ ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಕಾರಣಕ್ಕಾಗಿ ಸುವರ್ಣ ವಿಧಾನಸೌಧಕ್ಕೆ ಟ್ರ್ಯಾಕ್ಟರಗಳೊಂದಿಗೆ ಅಂದು ಮುತ್ತಿಗೆ ಹಾಕಿ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!