ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣ: ಐದನೇ ಆರೋಪಿ ಬಂಧನ….
ಬೆಳಗಾವಿ: ನಗರದ ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.
ಪ್ರಶಾಂತ ಶಿವಾನಂದ (೩೮) ಬಂಧಿತ ಅರೋಪಿ. ಬಿಎಎಂಎಸ್ ಡಾಕ್ಟರ್ ಆಗಿದ್ದು, ಈ ಕೊಲೆ ಪ್ರಕರಣದಲ್ಲಿ ಮಾತ್ರೆ ಹಾಗೂ ಇಂಜೆಕ್ಷನ್ ಹೇಗೆ ಕೊಡಬೇಕೆಂಬುದರ ಬಗ್ಗೆ ಸಲಹೆ ನೀಡಿದ ಆರೋಪ ಈತನ ಮೇಲಿದೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಿಯಲ್ ಎಸ್ಟೇಟ್ ಸಂತೋಷ ಪದ್ಮಣ್ಣವರನನ್ನು ಆತನ ಪತ್ನಿಯೇ ಫೇಸ್ ಬುಕ್ ಗೆಳೆಯರ ಜೊತೆ ಸೇರಿ ಕೊಲೆಗೈದ ಆರೋಪದಲ್ಲಿ ಈಗಾಗಲೇ ನಾಲ್ವರು ಆರೋಪಿಗಳು ಕಂಬಿ ಎಣಿಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
0