ಬೆಳಗಾವಿ.
ಬೆಳಗಾವಿ ತಹಶೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ. ರುದ್ರೇಶ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಐಗಳಿ ಠಾಣೆಯ ಎಎಸ್ ಐ ಶಂಭು ಮೇತ್ರಿ (50) ಅವರು ನೇಣಿಗೆ ಶರಣಾಗಿದ್ದಾರೆ.

ಎಎಸ್ ಐ ಅವರು ಸ್ವ ಗ್ರಾಮ ಅನಂತಪೂರದಲ್ಲಿ ನೇಣಿಗೆ ಶರಣಾಗಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಎಸ್ಪಿ ಅವರ ಪ್ರಕಾರ ಅವರು ಮದ್ಯವ್ಯಸನಿಯಾಗಿದ್ದರು ಆದರೂ ವಿಚಾರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಹಲವಾರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರಬಹುದು ಎನ್ನಲಾಗುತ್ತದೆ.
ಸ್ಥಳಕ್ಕೆ ಅಥಣಿ ಪೋಲಿಸರು ಬೇಟಿ ನೀಡಿ ಪರಶೀಲನೆ ನಡೆಸಿದ್ದಾರೆ