ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
`ಜೈನ ಧರ್ಮಕ್ಕೂ ಪ್ರತ್ಯೇಕ ನಿಗಮ ಕೊಡಿ’
ಬೆಳಗಾವಿ:
ಪ್ರತ್ಯೇಕ ನಿಗಮ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜೈನ ಧಮರ್ಿಯರು ಬೆಳಗಾವಿ ಸುವರ್ಣ ಸೌಧದ ಬಳಿ ಭಾರೀ ಪ್ರತಿಭಟನೆ ವ್ಯಕ್ತಪಡಿಸಿದರು,
ಜೈನ್ ಮುನಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಸಿ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಪತ್ರ ಅರ್ಪಿಸಿದರು.

ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವುದು ಸೇರಿದಂತೆ ಪ್ರತಿ ವರ್ಷ ಸಮುದಾಯದ ಹಿತಾಸಕ್ತಿಗಾಗಿ 200 ಕೋಟಿಯ ಅನುದಾನ ಮಂಜೂರು ಮಾಡಬೇಕು, .ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಸಮುದಾಯದ ಸದಸ್ಯರನ್ನು ನೇಮಕ ಮಾಡಬೇಕು, ಜೈನ್ ಸಮುದಾಯದ ಯುವಕರಿಗೆ ಶೈಕ್ಷಣಿಕ ಹಾಗೂ ಉದ್ಯೋಗದ ಕ್ಷೇತ್ರಗಳಲ್ಲಿ ಶೇ.20 ಮೀಸಲಾತಿ ನೀಡುವಂತೆ ಆಗ್ರಹಿಸಲಾಯಿತು,

ಜೈನ ಸಮುದಾಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೊಟ್ಟೆ ಕೊಡುವ ನಿಧರ್ಾರವನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಕೋರಲಾಯಿಉ,
ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜೈನ ಧರ್ಮದ ಅಹಿಂಸಾ ತತ್ವ ಸಮಾಜಕ್ಕೆ ಮಾದರಿಯಾಗಿದೆ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅವುಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೊಟ್ಟಿದ್ದು ಮನಮೋಹನ್ ಸಿಂಗ್ ನೇತೃತ್ವದ ಸಕರ್ಾರ. ನಿಮ್ಮ ಯಾವುದೇ ಬೇಡಿಕೆ ಈಡೇರಿಸಲು ನಮ್ಮ ಸಕರ್ಾರ ಬದ್ಧವಿದೆ. ನಮ್ಮ ಮೇಲೆ ಭರವಸೆ ಇಡಿ ಎಂದು ಹೇಳಿದರು.
ಜೈನ ಶಿಕ್ಷಣ ಸಂಸ್ಥೆಗಳಲ್ಲಿ ಮೊಟ್ಟೆ ವಿತರಣೆ ಕೈಬಿಡುವ ವಿಚಾರಪ್ರಸ್ತಾಪಿಸಿದ ಅವರು, ಜೈನ ಸಂಪ್ರದಾಯವನ್ನು ನಾವು ಗೌರವಿಸುತ್ತೇವೆ. ನಿಮ್ಮ ಧಾಮರ್ಿಕ ಭಾವನೆಗೆ ಧಕ್ಕೆ ತರುವಂಥ ಯಾವ ನಿಧರ್ಾರವನ್ನೂ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಜೈನ ಸಮಾಜದಲ್ಲಿ ಅನೇಕ ಸಮಸ್ಯೆಗಳಿವೆ. ಪ್ರಸ್ತುತ ಜೈನ ಸಮಾಜದ ಬೇಡಿಕೆಗಳನ್ನು ಈಡೇರಿಸಲು ಸರಕಾರ ಬದ್ದವಾಗಿದೆ. ಬಹುದಿನಗಳ ಬೇಡಿಕೆಯನ್ನು ಈಡೆರಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ಜೈನ ಶಿಕ್ಷಣ ಸಂಸ್ಥೆಗಳಲ್ಲಿ ಮೊಟ್ಟೆ ವಿತರಣೆಯನ್ನು ಸಕರ್ಾರ ಕಡ್ಡಾಯಗೊಳಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಸ್ವಾಭಿಮಾನ ಮತ್ತು ಪ್ರಾಮಾಣಿಕತೆಗೆ ಜೈನ ಸಮುದಾಯ ಮಾದರಿಯಾಗಿದೆ. ನಿಮ್ಮ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು. ಜೈನ ಶಿಕ್ಷಣ ಸಂಸ್ಥೆಗಳನ್ನು ಮೊಟ್ಟೆ ವಿತರಿಸುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿ, ಸರ್ಕಾರದ ಗಮನಸೆಳೆಯಲಾಗುವುದು ಎಂದರು.

ಜೈನ ಸಮುದಾಯದ ಮತ್ತು ಕಾಂಗ್ರೆಸ್ ಮುಖಂಡ ಮಹೇಂದ್ರ ಸಿಂಘಿ ಮಾತನಾಡಿ, ಕನರ್ಾಟಕಕ್ಕೆ ಜೈನ ಧರ್ಮದ ಕೊಡುಗೆ ಅಪಾರವಾಗಿದೆ. ಆದ್ದರಿಂದ ಜೈನ ಧರ್ಮದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಅನಿವಾರ್ಯ ಎಂದರು,
ರಾಜ್ಯ ಸಕರ್ಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಮಾತನಾಡಿ, ಚಿಕ್ಕೋಡಿಯಲ್ಲಿ ಅಲ್ಪಸಂಖ್ಯಾತರ ಮಕ್ಕಳಿಗಾಗಿ ಪ್ರತ್ಯೇಕ ವಸತಿ ನಿಲಯ ಮಂಜೂರುಗೊಳಿಸಲಾಗಿದೆ. ಶೀಘ್ರವೇ ಇದಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು. ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿ ಮುಖ್ಯಮಂತ್ರಿ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಸಕರ್ಾರ ಜೈನ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ಅಧಿವೇಶನದಲ್ಲಿ ಸಕರ್ಾರ ಇದಕ್ಕೆ ಸಮಂಜಸವಾದ ಉತ್ತರ ಕೊಡದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಜೈನ ಧರ್ಮದಲ್ಲಿ ದಿಗಂಬರ ಮತ್ತು ಶ್ವೇತಾಂಬರ ಸಮುದಾಯಗಳು ಒಂದಾಗಬೇಕು. ಸಮುದಾಯದ ಜನಪ್ರತಿನಿಧಿಗಳು ಪಕ್ಷಬೇಧ ಮರೆತು, ಜೈನ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರಸಂಗ ಬಂದರೆ ನಾನು ರಾಜಕೀಯವನ್ನೇ ತೊರೆಯುತ್ತೇನೆಯೇ ಹೊರತು, ಧರ್ಮ ಬಿಡುವುದಿಲ್ಲ ಎಂದರು.
ಗುಣಧರನಂದಿ ಮಹಾರಾಜರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಮೂಡಬಿದಿರೆಯ ಚಾರುಕೀತರ್ಿ ಭಟ್ಟಾರಕ ಸ್ವಾಮೀಜಿ, ಹೊಂಬುಜ ಮಠದ ದೇವೇಂದ್ರಕೀತರ್ಿ ಭಟ್ಟಾರಕ ಸ್ವಾಮೀಜಿ, ಕೊಲ್ಹಾಪುರದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ, ನಾಂದನಿ ಮಠದ ಜಿನಸೇನ ಭಟ್ಟಾರಕ ಸ್ವಾಮೀಜಿ, ಸೋಂದಾ ಮಠದ ಸ್ವಾಮೀಜಿ ಮಾತನಾಡಿದರು.
ಶಾಸಕರಾದ ಅಭಯ ಪಾಟೀಲ, ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಉತ್ತಮ ಪಾಟೀಲ, ರವಿರಾಜ ಪಾಟೀಲ, ವಿನೋದ ದೊಡ್ಡಣ್ಣವರ, ಸುನೀಲ ಹನುಮಣ್ಣವರ, ಹುಬ್ಬಳ್ಳಿಯ ವಿಮಲ ತಾಳಿಕೋಟೆ ಮತ್ತು ಸಂತೋಷ ಪಾಟೀಲ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಜೈನ ಧಮರ್ಿಯರು ಇದ್ದರು.