
ಇದು ಅಧಿವೇಶನವಲ್ಲ- ಪಿಕನಿಕ್
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ; ಇದು ಪಿಕ್ನಿಕ್‍ನಂತಿದೆಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ ಬೆಳಗಾವಿ: ಇಲ್ಲಿನದು ವಿಧಾನಸಭೆ, ವಿಧಾನಪರಿಷತ್ತಿನ ಅಧಿವೇಶನದಂತಿಲ್ಲ; ಇದು ಪಿಕ್ನಿಕ್‍ನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು.ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಇಂದು ಬೆಳಗಾವಿಯ ಮಾಲಿನಿ ಸಿಟಿ, ಯಡಿಯೂರಪ್ಪ ರಸ್ತೆಯಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಬಾಣಂತಿಯರ ಸಾವು ನಿರಂತರವಾಗಿದೆ. ಹಸುಗೂಸುಗಳೂ ಸಾವನ್ನಪ್ಪುತ್ತಿವೆ ಎಂದು…