
ಸಮಗ್ರ ತನಿಖೆ ನಡೆಸಲು ಮನವಿ
ಬೆಳಗಾವಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ ಅಸಂವಿಧಾನಿಕ ಪದದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರು ಸಭಾಪತಿಯವರಿಗೆ ಮನವಿ ಮಾಡಿದ್ದಾರೆ. ಆ ಪದ ಮಹಿಳಾ ಕುಲಕ್ಕೆ ಅವಮಾನವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಸಭಾಪತಿ ಹೊರಟ್ಟಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.