ನಾವೇನು ನೇಣು ಹಾಕಿಕೊಳ್ಳಬೇಕಾ?
ಬೆಳಗಾವಿ:ಮೂಡಾ ದಲ್ಲಿ ಅಕ್ರಮ ನಡೆದಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಕೋರ್ಟ್ನಲ್ಲಿ ಕೇಸ್ ನಡೆಯುತ್ತಿದೆ. ಇನ್ನೇನು ಮಾಡಬೇಕು?. ನಾವೇನು ನೇಣು ಹಾಕಿಕೊಳ್ಳಬೇಕಾ?. ಎಂದು ಪ್ರಶ್ನೆ ಮಾಡಿದವರು ಸಚಿವ ಭೈರತಿ ಸುರೇಶ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.ಮುಹೂರ್ತ ಫಿಕ್ಸ್ ಆಗಿರುವುದು ಯಡಿಯೂರಪ್ಪನವರ ಮಗ ವಿಜಯೇಂದ್ರ ರಾಜೀನಾಮೆಗೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗಲ್ಲ. ಬಿಜೆಪಿಯವರ ಗುಂಪು ಜಗಳವನ್ನು ಮೊದಲು…