ಜೀವಹಾನಿ ಆಗದಂತೆ ಮುನ್ನೆಚ್ಚರಿಕೆಗೆ ಸೂಚನೆ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸಭೆ ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆಗೆ ಸೂಚನೆ ಬೆಳಗಾವಿ, ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ…

