ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ- Priyanka
ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆಯ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಕುಡಚಿ ಗ್ರಾಮೀಣ ಹಾಗೂ ಆಲಖನೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ, ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವುದೇ ನನ್ನ ಕನಸಾಗಿದೆ ಎಂದು ತಿಳಿಸಿದರು….

