Headlines

ಲೋಕಸಭಾ ಚುನಾವಣೆ: ದೂರು ನಿರ್ವಹಣೆ, ಎಂಸಿಸಿ, ಸಿವಿಜಿಲ್ ಕೇಂದ್ರಗಳ ಸ್ಥಾಪನೆ

ಬೆಳಗಾವಿ, ಮಾ.23(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C-Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ….

Read More

ಟಿಕೆಟ್ ಕೇಳಿದವರ ಮೂಗಿಗೆ ತುಪ್ಪ ಸವರಿದ ಕಾಂಗ್ರೆಸ್..,!

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೇಳಿದವರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಮಾಜಿ ಶಾಸಕ ರಮೇಶ ಕುಡಚಿ ಆರೋಪಿಸಿದ್ದಾರೆ.ನಗರದಲ್ಲಿಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.ಬೆಳಗಾವಿಂದ ನಾನು ಕೂಡ ಒಬ್ಬ ಅಭ್ಯರ್ಥಿಆದರೆ ಪಕ್ಷ ನನಗೆ ಸಹಕರಿಸಲಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕುರುಬರ ಸಮಾವೇಶದಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಿಂದ ಕುರುಬ ಸಮಾಜಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳಲಾಗಿತ್ತು. . ಆದರೆ ಈಗ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ…

Read More

BJP ಗೆಲ್ಲಿಸೋದು ನಮ್ಮ ಗುರಿ- ಬಾಲಚಂದ್ರ

*ಬಿಜೆಪಿ ಟಿಕೆಟ್ ಯಾರಿಗೆ ನೀಡಿದ್ರೂ ಅವರ ಗೆಲುವಿಗೆ ಶ್ರಮಿಸುತ್ತೇವೆ.* *ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೋದಿ ಮತ್ತೊಮ್ಮೆ ಪ್ರಧಾನಿ*- *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಗುರುವಾರದಂದು ತಾಲೂಕಿನ…

Read More

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲಿ ಆರ್ಥಿಕ ದಿವಾಳಿತನ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಅಯೋಮಯ:ಬಸವರಾಜ ಬೊಮ್ಮಾಯಿ ಬಿಜೆಪಿ ಅವಧಿಯಲ್ಲಿಯೇ ದೊಡ್ಡ ಪ್ರಮಾಣದ ನೀರಾವರಿ ವ್ಯವಸ್ಥೆ ಆಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರು ತಾಲೂಕು ಮಾಕನೂರ್ ಬಳಿ ಚುನಾವಣಾ ಪ್ರಚಾರ ಸಭೆ…

Read More

ಮೃನಾಲ್ ಗೆ CM ಅಭಯ

ಬೆಂಗಳುರು.ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಜೊತೆಗಿದ್ದರು

Read More

ಲೋಕ ಸಮರದಲ್ಲಿ ಈಗಲೇ ಗಲಿಬಿಲಿ

ಪ್ರಚಾರದ ಮೊದಲ ದಿನವೇ ನೀತಿ ಸಂಹಿತೆ ಉಲ್ಲಂಘನೆ ಕೇಸ್. ಕುವೆಂಪು ನಗರದಲ್ಲಿರುವ ಸಚಿವೆ ಹೆಬ್ಬಾಳಕರ ನಿವಾಸ ಸಚಿವೆ ಹೆಬ್ಬಾಳಕರ ವಿರುದ್ಧ ಈ ದೂರು. ಶೆಟ್ಟರ್ ವಿರುದ್ಧ ನಿಲ್ಲದ Gobackshetter ಅಭಿಯಾನ ಬೆಳಗಾವಿ. ಲೋಕಸಮರಕ್ಕೆ ಸಂಬಂಧಿಸಿದಂತೆ ಇನ್ನೂ ಅಭ್ಯರ್ಥಿಗಳ ಆಯ್ಕೆಯ ಕುರಿತು ಅಂತಿಮ ಘೋಷಣೆಗೂ ಮುನ್ನವೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಒಂದಿಷ್ಡು ಹುಬ್ಬೇರಿಸುವಂತಹ ಘಟನೆಗಳು ನಡೆದಿವೆ. ಆದರೆ ಚುನಾವಣಾಧಿಕಾರಿಗಳು ಮಾತ್ರ ಯಾರ ಮುಲಾಜಿಗೂ ಒಳಗಾಗದೇ ಕಾನೂನು ರೀತಿ ಕ್ರಮ‌ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಹಾಗಿದ್ದರೆ ಏನಿವು ಪ್ರಕರಣಗಳು….

Read More

ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ- ಸತೀಶ್

ಬೆಳಗಾವಿ, ಚಿಕ್ಕೋಡಿ ಲೋಕಸಭೆ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾಗಿ ನಿಂತರೂ ಗೆಲ್ಲಿಸುವುದು ಮಾತ್ರ ನಮ್ಮ ಜವಾಬ್ದಾರಿ. ಅದೇ ನಿಟ್ಟಿನಲ್ಲಿ ನಾವು ಎಲ್ಲ ರೀತಿಯ ತಯಾರಿ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿವೇಶ್ವರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ…

Read More

ಲೋಕ ಸಮರದಲ್ಲಿ ಕಾಂಗ್ರೆಸ್ ಗೆಲ್ಲಿಸಿ’

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪತಾಕೆ ಹಾರಿಸಿ: ಸಚಿವ ಸತೀಶ್‌ ಜಾರಕಿಹೊಳಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಜನತೆಗೆ ತಿಳಿಸಿ-ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಗೆಲುವು ಸಾಧ್ಯ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷ ಗೆಲ್ಲಬೇಕಾಗಿದ್ದು, ಗೆಲ್ಲಿಸುವ ಪ್ರಯತ್ನವನ್ನು ನಿವೆಲ್ಲರೂ ಕೂಡಿ ಒಗ್ಗಟ್ಟಾಗಿ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್‌ ಪತಾಕೆ ಹಾರಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿವೇಶ್ವರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ದಕ್ಷಿಣ…

Read More

ಸಚಿವರ‌ ಮಕ್ಕಳೇ ಕಣಕ್ಕೆ

ಬೆಳಗಾವಿ. ಜಿಲ್ಲೆಯ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನಿರೀಕ್ಷಿಸಿದಂತೆ ಸವಲಚಿವರ ಮಕ್ಕಳ ಹೆಸರು ಅಂತಿಮವಾಗಿದೆ.. ನಾಳೆ ದಿ. 20 ರಂದು ಘೋಷಣೆ ಆಗಲಿದೆ. ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಜರ ಪುತ್ರ ಮೃನಾಲ್ ಹೆಬ್ಬಾಳಕರ ಮತ್ತು ಚಿಕ್ಕೋಡಿಗೆ ಸಚಿವ ಸತೂಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಬೆಳಗಾವಿಯಿಂದ ಡಾ. ಗಿರೀಶ್ ಸೋನವಾಲ್ಕರ ಹೆಸರು ಜೋರಾಗಿತ್ತು. ಅವರಿಗೆ ಟಿಕೆಟ್ ಎನ್ನುವ ಮಾತಿತ್ತು. ಇನ್ನು ಚಿಕ್ಕೋಡಿಗೆ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಲಾಗುವುದು ಎಂದು ಸಚಿವ…

Read More

ಶೆಟ್ಟರ್ ಇನ್ನೂ ಅಂತಿಮವಲ್ಲ- ಕಾದು ನೋಡಿ

ಬೆಂಗಳೂರು. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇನ್ನೂ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಎಲ್ಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಬೆಳಗಾವಿ ಕ್ಷೇತ್ರಕ್ಕೆ ಹೊರಗಿನವರ ಬದಲು ಸ್ಥಳೀಕ ರಿಗೆ ಟಿಕೆಟ್ ಕೊಡಿ ಎಂದು ಹೋಗಿದ್ದ ನಿಯೋಗಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಭರವಸೆ ಇದು. ಶೆಟ್ಟರ್ ಅವರು ಏನು ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಅದರ ಬಗ್ಗೆ ಅವರಿಗೆ ಮಾತಾಡಲು ಹೇಳುವೆ. ಟಿಕೆಟ್ ಇನ್ನೂ ಅಂತಿಮವಾಗಿಲ್ಲ. ಆದರೆ ಮಾಧ್ಯಮದಲ್ಲಿ ಭಿನ್ನ ವರದಿಗಳು ಬಂದರೆ ಮತಸಾರರಲ್ಲಿ ತಪ್ಪು ಸಙದೇಶ ಹೋಗುತ್ತದೆ.‌ಆದ್ದರಿಂದ ಅದರ…

Read More
error: Content is protected !!