ಪ್ರಕಾಶ ಹುಕ್ಕೇರಿ ಡಿ ಕೋಡ್ ಗೊತ್ತು..!
ಬೆಳಗಾವಿ-ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಫೈನಲ್ ಮಾಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಕುರಿತು ಈಗಾಗಲೇ ಪಟ್ಟಿ ಮಾಡಿ ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾಣ ಮಾಡಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾವು ಹೈಕಮಾಂಡಗೆ ಕಳುಹಿಸಿದ್ದೇವೆ. ಅಲ್ಲಿ ಯಾರು ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗುವುದು ಅವರನ್ನೇ ಲೋಕಸಭಾ ಕಣಕ್ಕೆ ಇಳಿಸಲಾಗುವುದು…

