
ವಸತಿರಹಿತರ ಆಶ್ರಯ ಕೇಂದ್ರಗಳ ಸಮರ್ಪಕ ನಿರ್ವಹಣೆಗೆ ಸೂಚನೆ
ಬೆಳಗಾವಿ. ನಗರದಲ್ಲಿರುವ ಐದು ವಸತಿರಹಿತರ ಆಶ್ರಯ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜತೆಗೆ ಊಟ ಹಾಗೂ ಇತರೆ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸಮರ್ಪಕವಾಗಿ ನಿರ್ವಹಿಸಬೇಕು. ಅಗತ್ಯವಿದ್ದವರಿಗೆ ಇದರ ಪ್ರಯೋಜನ ದೊರಕಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಾಗಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಜ.6) ನಡೆದ ಡೇ ನಲ್ಮ್ ಯೋಜನೆಯ ವಸತಿರಹಿತರ ಆಶ್ರಯ ಕೇಂದ್ರಗಳ ನಗರ ಮಟ್ಟದ ಅಧಿಕಾರಯುಕ್ತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿರಹಿತರಿಗೆ ತಕ್ಷಣಕ್ಕೆ ಅನುಕೂಲವಾಗುವಂತೆ ನಗರದಲ್ಲಿರುವ ಐದು ಕೇಂದ್ರಗಳ ವಿಳಾಸ,…