ಮುಂಬಯಿ.
ಬೆಂಗಳೂರಿನಲ್ಲಿ ಇದೇ 18 ಮತ್ತು 19 ರಂದು ಎರಡು ದಿನಗಳ ಕಾಲ ನಡೆಯಲಿರುವ ಆಖಿಲ ಕರ್ನಾಟಕ ಬ್ರಾಹ್ಮಣ ಸಮಾವೇಶಕ್ಕೆ ಎಲ್ಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿದ್ದತೆಯಲ್ಲಿ ತೊಡಗಿದ್ದಾರೆ.

ಈಗಾಗಲೇ ದೆಹಲಿಗೆ ತೆರಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ರಾಜನಾಥ ಸಿಂಗ್, ಪ್ರಲ್ಹಾದ ಜೋಶಿ, ಬಿ.ಎಲ್. ಸಂತೋಷ ಸೇರಿದಂತೆ ಇನ್ನೂ ಹಲವಾರು ಗಣ್ಯಾತಿ ಗಣ್ಯರಿಗೆ ಖುದ್ದು ಭೆಟ್ಡಿಯಾಗಿ ಆಮಂತ್ರಣ ಕೊಟ್ಡು ಬಂದಿದ್ದಾರೆ.
ಇಂದು ಬೆಳಿಗ್ಗೆ ಮುಂಬಯಿಗೆ ತೆರಳಿದ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೆಟ್ಡಿಯಾಗಿ ಸಮಾವೇಶಕ್ಕೆ ಬರಲು ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಜಯನಗರ ಶಾಸಕರು ಸಿ ಕೆ ರಾಮಮೂರ್ತಿ ಅವರುಸಹ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಬ್ರಾಹ್ಮಣ ಮಹಾ ಸಮ್ಮೇಳನಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮಹಾಸಭೆ ಸಂಘಟನಾ ಕಾರ್ಯದರ್ಶಿ ಹಾಗೂ ಸಮ್ಮೇಳನದ ಪ್ರಧಾನ ಸಂಚಾಲಕ ಕಾರ್ತಿಕ್ ಬಾಪಟ್ ಹಾಗು ಅರುಣ್ ಹಿರಿಯಣ್ಣ ಉಪಸ್ಥಿತರಿದ್ದರು –
ಅನಗೋಳ ಪಂಚರ ಘೋಷಣೆ
https://youtube.com/shorts/NLi8EQ4uRzc?feature=share