
ಮಹಾ ಕುಂಭ ಕಾಲ್ತುಳಿತ- ಬೆಳಗಾವಿ ಬಿಜೆಪಿಯರಿಬ್ಬರಿಗೆ ಗಾಯ
ಇಬ್ಬರು ಮಹಿಳಾ ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರಿಗೆ ಗಾಯ ಬೆಳಗಾವಿ: ಮಹಾಕುಂಭದಲ್ಲಿ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಸೇರಿದಂತೆ ನಾಲ್ವರಿಗೆ ಗಾಯಗೊಂಡಿದ್ದಾರೆಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆಗೆ ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ ಇದ್ದ ಬಾಲಕಿಯರಾದ ಮೇಘಾ, ಜ್ಯೋತಿ ಅವರಿಗೂ ಗಾಯಗಳಾಗಿವೆ. ಮೂರು ದಿನಗಳ ಹಿಂದೆ ಎಲ್ಲರೂ ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಅಲ್ಲಿನ ವೈದ್ಯರಿಂದ ನಾಲ್ವರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಸಂಬಂಧಿಕರಿಗೆ ಬಂದಿದೆ….