ಮೈಕ್ರೊ ಫೈನಾನ್ಸ್- ಸಾಲ ಮನ್ನಾ ಅಸಾಧ್ಯ

ಕಾನೂನು ಬದ್ಧ ವಸೂಲಾತಿಗೆ ಕ್ರಮವಹಿಸಬೇಕು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,

: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಫೆ.01) ನಡೆದ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು ಬದ್ಧವಾಗಿ ನೋಟಿಸ್ ಜಾರಿ ಮಾಡಿ ಮಾಡಬೇಕು.

ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನ ಆಗುತ್ತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ನಂಬಿಕೆಯಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಿದೆ. ಇದರಲ್ಲಿ ಸಾಲ ಮನ್ನಾ ಎಂಬ ಪ್ರಶ್ನೆಯೇ ಇಲ್ಲ. ನಿಯಮಾನುಸಾರ ಕಾಲಾವಕಾಶ ನೀಡಿ ಸಾಲ ಮರುಪಾವತಿ ಮಾಡಬೇಕು ಎಂದು ತಿಳಿಸಿದರು.

0

Leave a Reply

Your email address will not be published. Required fields are marked *

error: Content is protected !!