Headlines

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ*
ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ
ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ

ಬೆಂಗಳೂರು

ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.


ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ*
ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು ಭಾರತೀಯ ರಿಸರ್ವ ಬ್ಯಾಂಕ್‌ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್(SA-DHAN),ಎಕೆಎಂಐ,ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು , ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ. ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ.

ಸಹಾಯವಾಣಿ

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆ
ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು.
ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್‌ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು.

ಡಾ.ಶಾಲಿನಿ ರಜನೀಶ್
ಮುಖ್ಯ ಕಾರ್ಯದರ್ಶಿಗಳು,ಕರ್ನಾಟಕ ಸರ್ಕಾ

Leave a Reply

Your email address will not be published. Required fields are marked *

error: Content is protected !!