ದೆಹಲಿಯಲ್ಲಿ ಬಿಜೆಪಿ ಜಯಭೇರಿ: ವಿಜಯೋತ್ಸವ
ಬೆಳಗಾವಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಶನಿವಾರ ವಿಜಯೋತ್ಸವ ಆಚರಿಸಿದರು.
ಇಲ್ಲಿನ ಚೆನ್ನಮ್ಮ ಸರ್ಕಲ್ ನಲ್ಲಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ನಡೆದ ಈ ವಿಜಯೋತ್ಸವ ಆಚರಣೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಜಯಘೋಷಗಳೊಂದಿಗೆ ಸಂಭ್ರಮಾಚರಣೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಭಯ ಪಾಟೀಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ಬೆಂಬಲ ವ್ಯಕ್ತಪಡಿಸಿರುವ ರಾಷ್ಟ್ರ ರಾಜಧಾನಿ ದೆಹಲಿ ಜನತೆ ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಭೂತಪೂರ್ವ ಗೆಲುವು ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ಸುಳ್ಳು, ಭ್ರಷ್ಟಾಚಾರ ಅಷ್ಟೇ ಅಲ್ಲದೇ, ದೇಶವನ್ನು ಒಡೆಯುವ ಕೆಲಸವನ್ನು ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಮಾಡಿತ್ತು. ಆದರೆ, ಈ ಬಾರಿ ದೆಹಲಿ ಜನತೆ ಆಪ್ ಗೆ ತಕ್ಕ ಉತ್ತರ ನೀಡಿದ್ದಾರೆ. ಮುಂದೆ, ಆಮ್ ಆದ್ಮಿ ಪಕ್ಷವೊಂದಿತ್ತು ಎನ್ನುವ ಸ್ಥಿತಿ ಬರಲಿದೆ ಎಂದು ಶಾಸಕ ಅಭಯ ಪಾಟೀಲ ಭವಿಷ್ಯ ನುಡಿದರು.
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಮಹಾನಗರ ವತಿಯಿಂದ ಹಮ್ಮಿಕೊಂಡಿದ್ದ ಈ ವಿಜಯೋತ್ಸವದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಖೋತ್. ಕೋಶ್ಯಾಧ್ಯಕ್ಷ ಸಂತೋಷ್ ದೇಶನೂರ, ಬಿಜೆಪಿ ಮುಖಂಡರಾದ ಮುರುಘೇಂದ್ರ ಗೌಡ ಪಾಟೀಲ್, ದಾದಾಗೌಡ ಬಿರಾದರ್, ಉಜ್ವಲಾ ಬಡವಾನಚೆ, ವಿಠ್ಠಲ ಸಾಯನ್ನವರ್ ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು