ನಾಮನಿರ್ದೇಶಿತರಿಗೆ ಮತದಾನದ ಹಕ್ಕು ಬೇಡ- ರಾಜ್ಯಪಾಲ

ಬೆಂಗಳೂರು

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡುವುದು ಸರಿಯಾದ ಕ್ರಮವಲ್ಲ ಎನ್ನುವ ಮೂಲಕ ಸರ್ಕಾರ ಕಳಿಸಿದ ಮತ್ತೊಂದು ವಿಧೇಯಕವನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳಿಸಿದ್ದಾರೆ.

ರಾಜ್ಯ ಸರ್ಕಾರ ಈ ವಿಧೇಯಕಲ್ಲಿ ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿ ಅಂಶಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸಹಕಾರಿ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ. ಚುನಾಯಿತ ಸದಸ್ಯರ ಹಕ್ಕುಗಳನ್ನು ಹಿಂಬಾಗಿಲಿನ ಮೂಲಕ ಕಸಿದು ಕೊಳ್ಳಲಾಗುತ್ತದೆ.

ಅಲ್ಲದೇ ಇದು ಸಹಕಾರಿ ಕ್ಷೇತ್ರದ ಸ್ವಾಯತ್ತತೆಯನ್ನು ದುರ್ಬಲಗೊಳಿಸುವ ಹೆಜ್ಜೆಯಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ಇನ್ನೂ ಕರ್ನಾಟಕ ಸೌಹಾರ್ಧ ಸಹಕಾರಿ (ತಿದ್ದುಪಡಿ) ವಿಧೇಯಕ – 2024ಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಪಾಲರು, ಈ ವಿಧೇಯಕದಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ ರದ್ದುಗೊಳಿಸುವುದಾಗಿತ್ತು. ಸಹಕಾರ ಸಂಘಗಳ ಚುನಾವಣೆ ಸ್ವತಂತ್ರ ಮತ್ತು ನ್ಯಾಯಯುತವಾಗಿ ನಡೆಸಲು ಪ್ರಾಧಿಕಾರವಿದೆ. ಆರ್ಥಿಕ ಹೊರೆಯ ಕಾರಣದಿಂದಾಗಿ ಸಹಕಾರಿ ಚುನಾವಣಾ ಪ್ರಾಧಿಕಾರಗಳನ್ನು ರದ್ದುಗೊಳಿಸುವ ಪ್ರಸ್ತಾಪವು ಸೂಕ್ತವಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!