
ಬಿಜೆಪಿಯಿಂದ ಯತ್ನಾಳ ಔಟ್..!
ಬೆಂಗಳೂರು. ರಾಜ್ಯದಲ್ಲಿನ ಬಿಜೆಪಿ ಬಣ ಬಡಿದಾಟಕ್ಕೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇದರಿಂದ ಬಿಜೆಪಿಯಲ್ಲಿ ವಿಜಯೇಂದ್ರ ಬಣ ಮೇಲುಗೈ ಸಾಧಿಸಿದಂತಾಗಿದೆ.ಆದರೆ ಯತ್ನಾಳ ಮುಂದಿನ ನಡೆ ಏನು ಎನ್ನುವುದನ್ನು ಕಾದು ನೋಡಬೇಕಿದೆ.