Headlines

ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಷಿಯೇಶನ್ ನೂತನ ಸಂಘದ ಉದ್ಘಾಟನೆ

ಏಪ್ರಿಲ್6 ರಂದು ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಷಿಯೇಶನ್ ನೂತನ ಸಂಘದ ಉದ್ಘಾಟನೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಷಿಯೇಶನ್ ನೂತನ ಸಂಘದ ಉದ್ಘಾಟನಾ ಸಮಾರಂಭ ನಡೆಯಲಿದೆ. ಇಂದು (ಏಪ್ರಿಲ್ 6 ರಂದು) ಬೆಳಗ್ಗೆ 10.30 ಕ್ಕೆ ಬೆಳಗಾವಿಯ ಶಿವಬಸವ ನಗರದ ಎಸಜಿಬಿಐಟಿ ಕಾಲೇಜ್ ಸಭಾಂಗಣದಲ್ಲಿ ಸಂಘದ ಉದ್ಘಾಟನಾ ಸಮಾರಂಭ ನಡೆಯಲಿದೆ.

Oplus_131072

ನೂತನ ಸಂಘಟನೆಯನ್ನ ಲೋಕೋಪಯೋಗಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ‌ ಉದ್ಘಾಟನೆ ಮಾಡಲಿದ್ದಾರೆ. ಸಂಘದ ಗುರುತಿನ ಚೀಟಿ ಹಸ್ತಾಂತರ ಮತ್ತು ಲೋಗೋ ಅನಾವರಣವನ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇರವೇರಿಸುವರು‌. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಷಿಯೇಶನ್ ಅಧ್ಯಕ್ಷ ಮಂಜುನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ವಿಶೇಷ ಆಮಂತ್ರಿತರಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ, ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಆಗಮಿಸಲಿದ್ದಾರೆ.

ಗೌರವಾನ್ವಿತ ಅತಿಥಿಗಳಾದ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ‌, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ನವದೆಹಲಿ ಸರ್ಕಾರದ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷ ಭರಮಗೌಡ ಕಾಗೆ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಮಹಾಂತೇಶ ಕೌಜಲಗಿ ಆಗಮಿಸಲಿದ್ದಾರೆ. ಇನ್ನೂ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ‌, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ‌, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೋಲ್ಲೆ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ, ಎಂಎಲಸಿ ಹನುಮಂತ ನಿರಾಣಿ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್, ಅಥಣಿ ಶಾಸಕ ಲಕ್ಷ್ಮಣ ಸವದಿ, ಎಂಎಲಸಿ ಡಾ.ಸಾಬಣ್ಣ ತಳವಾರ, ಎಂಎಲಸಿ ಚನ್ನರಾಜ್ ಹಟ್ಟಿಹೊಳಿ, ಎಂಎಲಸಿ ಲಖನ್ ಜಾರಕಿಹೊಳಿ‌, ಎಂಎಲಸಿ ಎಂ.ನಾಗರಾಜು, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಹುಕ್ಕೇರಿ ಶಾಸಕ ನಿಖಿಲ್ ಕತ್ತಿ, ಖಾನಾಪುರ ಶಾಸಕ ವಿಠಲ್ ಹಲಗೇಕರ, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ ಆಗಮಿಸಲಿದ್ದಾರೆ. ಇನ್ನೂ ಗೌರವಾನ್ವಿತ ಆಮಂತ್ರಿತರಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ ಶಿಂಧೆ, ಬೆಳಗಾವಿ ಪಾಲಿಕೆ ಆಯುಕ್ತೆ ಶುಭ ಬಿ., ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ವಿಲಾಸ ಜೋಶಿ, ಬೆಳಗಾವಿ ಮರಾಠಿ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಾ ಶಾಪೂರಕರ್ ಆಗಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!