ಸಚಿವ ಸತೀಶ್ ಜಾರಕಿಹೊಳಿ ಗುಣಗಾನ
`ಟಿವಿ ಮಿಡಿಯಾ ಅಸೋಸಿಯೇಷನ್ ಉದ್ಘಾಟನೆ ಸಮಾರಂಭದಲ್ಲಿ ಸತೀಶ್ ಮಾತು.
ಬೆಳಗಾವಿ.
ಸಂಯುಕ್ತ ಕರ್ನಾಟಕ ದಿನ ಪತ್ತಿಕೆ ಜನಪ್ರಿಯತೆಯ ಪತ್ರಿಕೆಯಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು,
ನಗರದಲ್ಲಿಂದು ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ನಮಗೆ ಸಂಯುಕ್ತ ಕರ್ನಾಟಕ ಮತ್ತು ಬೆಳಗಾವಿಗೆ ಬಂದರೆ ಮತ್ತೊಂದು ಸ್ಥಳೀಯ ಪತ್ರಿಕೆ ನೋಡಲು ಸಿಗುತ್ತಿತ್ತು, ಸಂಯುಕ್ತ ಕರ್ನಾಟಕ ಬಹಳ ಜನಪ್ರಿಯತೆ ಗಳಿಸಿತ್ತು. ಚನ್ನಾಗಿ ಬರುತ್ತಿದೆ ಎಂದರು,

ಆಗ ಲಂಕೇಶ ಪತ್ರಿಕೆ ಯಾವಾಗ ಸಿಗುತ್ತದೆ ಎನ್ನುವುದನ್ನು ನಾವು ದಾರಿ ಕಾಯುತ್ತ ಕುಳಿತಿರುತ್ತಿದ್ದೇವು ಎನ್ನುವ ಮೂಲಕ ಮುದ್ರಣ ಮಾಧ್ಯಮದ ವರ್ಷಸ್ಸು ಯಾವ ರೀತಿ ಇತ್ತು ಎನ್ನುವುದನ್ನು ಅವರು ವಿವರಿಸಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಗುರುತಿಸಲಾಗುವ ಮಾಧ್ಯಮ ರಂಗವು ಆಡಳಿತ ವ್ಯವಸ್ಥೆ ಸುಧಾರಣೆಗೆ ಅನುಕೂಲ ಕಲ್ಪಿಸುವುದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಭಾಷಾ ಸೂಕ್ಷ್ಮತೆ ಇರುವುದರಿಂದ ಜಿಲ್ಲೆಯಲ್ಲಿ ನಡೆಯುವ ವರದಿಗಳು ದೆಹಲಿಯಲ್ಲಿ ಕೂಡ ಸದ್ದು ಮಾಡುತ್ತವೆ. ಆದ್ದರಿಂದ ಕೆಲವೊಮ್ಮೆ ವೈಯಕ್ತಿಕ ಘರ್ಷಣೆಗಳು ಕೂಡ ಜಾತಿ-ಧರ್ಮ, ಭಾಷಾ ವೈಷಮ್ಯದ ಸ್ವರೂಪ ಪಡೆದುಕೊಂಡು ಜಿಲ್ಲೆಗೆ ಕೆಟ್ಟ ಹೆಸರು ತರುತ್ತವೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಆದ್ದರಿಂದ ಜಾತಿ-ಧರ್ಮ, ಭಾಷೆಯ ವಿಚಾರಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ವರದಿ ಮಾಡುವಾಗ ಮಾಧ್ಯಮ ಪ್ರತಿನಿಧಿಗಳು ಸಮಗ್ರ ಸಂಗತಿಯನ್ನು ಪರಾಮರ್ಶೆ ಮಾಡಿಕೊಂಡು ನೈಜ ಸಂಗತಿಯನ್ನು ವರದಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು, ಪ್ರಜಾತಂತ್ರದ ವ್ಯವಸ್ಥೆಯಲ್ಲಿ ನ್ಯಾಯಾಂಗ, ಶಾಸಕಾಂಗ, ಕಾಯಾರ್ಂಗ, ಮಾಧ್ಯಮ ಮೂಲಕ ಪ್ರಜಾತಂತ್ರ ಯಶಸ್ವಿಯಾಗಿ ನಡೆಯುತ್ತದೆ. ಸಮಾಜದಲ್ಲಿ ಜಾಗೃತಿ, ಜನರಲ್ಲಿ ತಿಳುವಳಿಕೆ ಮೂಡಿಸುವ ಕಾರ್ಯ ಮಾಧ್ಯಮ ನಿರ್ವಹಿಸುತ್ತದೆ ಎಂದರು,
ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ,ವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ ಮಾತನಾಡಿದರು. ಪಾಲಿಕೆ ಆಯುಕ್ತೆ ಶುಭ ಬಿ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮುಂತಾದವರು ಹಾಜರಿದ್ದರು.ಗೌರವಾಧ್ಯಕ್ಷ ಶ್ರೀಕಾಂತ್ ಕುಬಕಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಸೋಸಿಯೇಶನ್ ಅಧ್ಯಕ್ಷ ಮಂಜುನಾಥ ಪಾಟೀಲ ಅಧ್ಯಕ್ಷತೆ ವಹಿಸಿದ್ದರು, ಚಂದ್ರಕಾಂತ ಸುಗಂಧಿ ಸ್ವಾಗತಿಸಿದರು. ಸುನಿತಾ ದೇಸಾಯಿ ವಂದಿಸಿದರು.