
ಅಭಯ ಪಾಟೀಲ: “ನಮ್ಮ ಸರ್ಕಾರ ಬಂದ ಮೇಲೆ ಎಲ್ಲ ಲೆಕ್ಕ ಚುಕ್ತಾ”
ಬೆಳಗಾವಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿದರು. ಅವರು, “ನಮ್ಮ ಸರ್ಕಾರ ಬಂದ ಮೇಲೆ ಎಲ್ಲ ಲೆಕ್ಕ ಚುಕ್ತಾ ಆಗಲಿದೆ” ಎಂದು ಹೇಳಿದರು.

- ಜಗದೀಶ ಶೆಟ್ಟರ್: “2028ರಲ್ಲಿ ಕಾಂಗ್ರೆಸ್ ಮನೆಗೆ ಹೋಗುವುದು ನಿಶ್ಚಿತ ಎಂದರು
, “2028ರಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಹೋಗುವುದು ನಿಶ್ಚಿತ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ಭವಿಷ್ಯ ನುಡಿದರು.

- ಕಾಂಗ್ರೆಸ್ ಸರ್ಕಾರದ ವಿರುದ್ಧ ತುಘಲಕ್ ದರ್ಬಾರ್ ಆರೋಪ ಸಂಸದ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಸರ್ಕಾರವನ್ನು “ತುಘಲಕ್ ದರ್ಬಾರ್” ಎಂದು ಕರೆದಿದ್ದಾರೆ. ಅವರು, “ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರನ್ನು ಸಂಕಷ್ಟಕ್ಕೆ ದೂಡಲಾಗಿದ್ದು, ಇಲ್ಲಿಯವರೆಗೆ ಒಂದು ರೂಪಾಯಿ ಕೂಡ ಅಭಿವೃದ್ಧಿಗೆ ಹಣ ಬಿಡುಗಡೆ ಆಗಿಲ್ಲ” ಎಂದು ಆರೋಪಿಸಿದರು.
ಬೆಳಗಾವಿ: ಬೆಲೆ ಏರಿಕೆ ಮಾಡುವ ಮೂಲಕ ಬಡಜನರ ಬದುಕನ್ನು ದುರ್ಬರ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ಕಾಂಗ್ರೆಸ್ನ ತೆರಿಗೆ ದಾಳಿಗೆ ಕಿಡಿಕಾರಿದರು.
ಇಲ್ಲಿನ ,ಗೋವಾವೇಸ್ ವೃತ್ತದ ಬಳಿಯಿರುವ ಪಾಲಿಕೆ ಕಾಂಪ್ಲೆಕ್ಸ್ ಬಳಿ ಬುಧವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ ಎರಡನೇ ಹಂತದ ಜನಾಕ್ರೊಶ ಯಾತ್ರೆಯ ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಬಡ, ರೈತರು, ಮಧ್ಯಮವರ್ಗದ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಹರಿಹಾಯ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಭ್ರಷ್ಟಾಚಾರಕ್ಕಾಗಿಯೇ ಬದುಕಿದ ಪಕ್ಷ ಕಾಂಗ್ರೆಸ್. ಎಲ್ಲೆಲ್ಲಿ ಆಡಳಿತ ನಡೆಸಿದೆಯೋ ಅಲ್ಲಲ್ಲಿ ಭ್ರಷ್ಟಾಚಾರದ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮುಂದುವರೆಸಿಕೊಂಡು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಹಿಂದೂಗಳಿಗೆ ಅವಮಾನ ಮಾಡುತ್ತಿದೆ. ಭ್ರಷ್ಟಾಚಾರ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಗಳಿಗೆ ಗರ ಬಡಿದಿದ್ದು, ಬೆಲೆ ಏರಿಕೆಯಿಂದಾಗಿ ಜನರು ಆಕ್ರೋಶಗೊಂಡಿದ್ದಾರೆ. ಕಾಂಗ್ರೆಸ್ ಶಾಸಕರು, ಸಚಿವರು ಮುಖ ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರು ಹೇಳುತ್ತಲೇ ಎಸ್ ಸಿ, ಎಸ್ ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದುರುಪಯೋಗಮಾಡಿಕೊಳ್ಳಲಾಗಿದೆ. ಅಹಿಂದ ನಾಯಕರೆಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಮುಸ್ಲಿಮರ ತುಷ್ಟೀಕರಣವನ್ನು ಮುಂದುವರೆಸುವ ಮೂಲಕ ಎಲ್ಲಾ ಸಮುದಾಯಗಳನ್ನು ಮರೆತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಗೀತಾ ಸುತಾರ, ಸಂಸದರಾದ ಗೋವಿಂದ ಕಾರಜೋಳ, ಯದುವೀರ್ ಒಡೆಯರ್, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ, ಬಿ.ಶ್ರೀರಾಮುಲು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಎನ್.ರವಿಕುಮಾರ, ಶಾಸಕರಾದ ಅಭಯ ಪಾಟೀಲ, ದುರ್ಯೋಧನ ಐಹೋಳೆ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡವಾಡ, ವಿಶ್ವನಾಥ ಪಾಟೀಲ, ಮಹಾಂತೇಶ ಕವಟಗಿಮಠ, ಗೀತಾ ಸುತಾರ, ಸುಭಾಷ್ ಪಾಟೀಲ, ಟಿ.ರಾಜೀವ, ಬಾ.ಸೋನಾಲಿ ಸರ್ನೋಬತ್, ಹನುಮಂತ ನಿರಾಣಿ, ಎಂ.ಬಿ.ಜಿರಲಿ, ಉಜ್ವಲಾ ಬಡವನಾಚೆ, ಹನುಮಂತ ಕೊಂಗಾಲಿ, ರಾಜಶೇಖರ ಡೋಣಿ, ಸಿದ್ದನಗೌಡ ಪಾಟೀಲ, ಮಹಾದೇವಪ್ಪ ಯಾದವಾಡ, ಆನಂದ ಚಹ್ವಾಣ, ಧನಂಜಯ ಜಾಧವ, ಮಹಾಂತೇಶ ವಕ್ಕುಂದ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಸಿಎಂ ಸಿದ್ದು ಮಾಜಿ ಆಗ್ತಾರೆ..!

ಬರುವ ಡಿಸೆಂಬರ್ ವೇಳೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದಿಲ್ಲ. ಅವರ ಪಕ್ಷದಲ್ಲಿಯೇ ಅವರ ವಿರುದ್ಧ ಕತಿ ಮಸೆಯುತ್ತಿದ್ದಾರೆ. ಹೀಗಾಗಿ, ಅಧಿಕಾರದಿಂದ ಕೆಳಗಿಯುವ ಹೊತ್ತಿಗೆ ಆದಷ್ಟು ಲೂಟಿ ಹೊಡೆದುಕೊಂಡು ಹೋಗಲು ಸಿದ್ಧರಾಮಯ್ಯ ಸಿದ್ಧವಾಗಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳು ಎಟಿಎಂ ಆಗಿ ಕೆಲಸ ಮಾಡುತ್ತಿವೆ.
–ಆರ್,ಅಶೋಕ

ಮುಸ್ಲೀಂ ಸಿಎಂ
ಹಿಂದೂ ವಿರೋಧಿ ನಿಲುವು ತಾಳಿರುವ ಸಿದ್ದರಾಮಯ್ಯ, ಮುಸ್ಲಿಮರ ಮುಖ್ಯಮಂತ್ರಿ ಆಗಿದ್ಧಾರೆ. ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಜನಸಾಮಾನ್ಯರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ. ಅಲ್ಲದೇ, ಅಧಿಕಾರಕ್ಕೆ ಬಂದು 20 ತಿಂಗಳಲ್ಲಿಯೇ ಜನಪ್ರಿಯತೆ ಕಳೆದುಕೊಂಡು ಜನಾಕ್ರೋಶಕ್ಕೆ ಗುರಿಯಾಗಿದೆ.
-ಬಿ.ವೈ.ವಿಜಯೇಂದ್ರ
.