
ಬೆಳಗಾವಿಗೂ ವಂದೇ ಭಾರತ…!
ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಬೆಳಗಾವಿ ಜನರ ಬಹುದಿನಗಳ ಕನಸು ಈಗ ನನಸಾಗಿದೆ. ಈ ವಿಚಾರವಾಗಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ಬೆಳಗಾವಿ ಜನತೆಯ ಕನಸನ್ನು ಸತತ ಪ್ರಯತ್ನದಿಂದ ನನಸು ಮಾಡಿದ ಸಂತೃಪ್ತ ಭಾವ, ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಎಂದು ತಿಳಿಸಿದ್ದಾರೆ. ಬೆಳಗಾವಿ ಮತ್ತು ಬೆಂಗಳೂರಿನ ನಡುವೆ ವಂದೇ ಭಾರತ್ ರೈಲು ಸಂಚಾರದಿಂದ ಪ್ರಯಾಣ ಮತ್ತಷ್ಟು ಸುಗಮವಾಗುವುದಲ್ಲದೇ, ಸಮಯವೂ ಉಳಿತಾಯವಾಗಲಿದೆ. ಅಲ್ಲದೇ, ಬೆಳಗಾವಿಯ…