ಲಾಕರ್ ದೋಚಿದವ ಲಾಕ್

14 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ
`ಬ್ಯಾಂಕ್ ಲಾಕರ್ ದೋಚಿದವನ ಬಂಧನ’
ಬೆಳಗಾವಿ.
ಇಲ್ಲಿನ ಭಾಗ್ಯ ನಗರದ ಇಂಡಿಯನ್ ಬ್ಯಾಂಕ್ ಶಾಖೆಯ ಲಾಕರ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಂದ್ರಕಾಂತ ಬಾಲಾಜಿ ಜೋರ್ಲಿ (32 ವರ್ಷ) ಬಂಧಿತ ಆರೋಪಿ.

ಬಂಧಿತನಿಂದ ಸುಮಾರು 143.9 ಗ್ರಾಂ ಬಂಗಾರದ ಆಭರಣಗಳು ಹಾಗೂ 14 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬರಾವ್, ಉಪ ಆಯುಕ್ತ ರೋಹನ ಜಗದೀಶ , ಎನ್. ನಿರಂಜನ್ ರಾಜೇ ಅರಸ್ ಹಾಗೂ ಖಡೇಬಜಾರ್ ಎಸಿಪಿ ಶೇಖರಪ್ಪ ಎಚ್. ಮಾರ್ಗದರ್ಶನ ಮತ್ತು ಟಿಳಕವಾಡಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಪರಶುರಾಮ ಪೂಜೇರಿ ನೇತೃತ್ವದಲ್ಲಿ ಪ್ರಕರಣವನ್ನು ಬೇಧಿಸಲಾಯಿತು.
ಪ್ರಕರಣ ಬೇಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!