ಕಾಂಗ್ರೆಸ್ ಬಲವರ್ಧನೆಗೆ ಯುವಶಕ್ತಿ ಮುಖ್ಯ: ಸಚಿವ ಸತೀಶ್ ಜಾರಕಿಹೊಳಿ
ಬೈಲಹೊಂಗಲ:“ಬಿಜೆಪಿಯವರು ಕೆಲಸ ಮಾಡದೇ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಜನಪರ ಅಭಿವೃದ್ಧಿ ಕಾರ್ಯ ಮಾಡಿದ್ದರೂ ಅದರ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಯುವ ಕಾರ್ಯಕರ್ತರು ಈ ದಿಕ್ಕಿನಲ್ಲಿ ತೊಡಗಿಕೊಂಡರೆ, ದೇಶ-ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಬಹುದು” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು. ಬೆಳಗಾವಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಪರ್ವ ಪ್ರತಿಜ್ಞೆ” ಸಮಾರಂಭವನ್ನು ಬೈಲಹೊಂಗಲದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು,“2028ರ ಚುನಾವಣೆ…

