ಬೆಳಗಾವಿ,
ಶ್ರಾವಣ ಮಾಸದ ಧಾರ್ಮಿಕ-ಸಾಂಸ್ಕೃತಿಕ ವಾತಾವರಣಕ್ಕೆ ಕಳೆ ಹೆಚ್ಚಿಸಲು ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ವತಿಯಿಂದ “ಶ್ರಾವಣ ಸಂಭ್ರಮ” ಎಂಬ ವೈವಿಧ್ಯಮಯ ಹಬ್ಬವನ್ನು ಆಯೋಜಿಸಲಾಗಿದೆ.
ಆಗಸ್ಟ್ 16 ಮತ್ತು 17ರಂದು ಆನಗೋಳ ರಸ್ತೆಯಲ್ಲಿರುವ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ನಡೆಯಲಿರುವ ಈ ಎರಡು ದಿನಗಳ ಹಬ್ಬದಲ್ಲಿ ಉದ್ಯಮಿಗಳು, ತಮ್ಮ ಉತ್ಪನ್ನಗಳು ಹಾಗೂ ಸೇವೆಗಳ ಪ್ರದರ್ಶನ ಮತ್ತು ಮಾರಾಟ ನಡೆಸಲಿದ್ದಾರೆ.

ಇದೇ ಸಂದರ್ಭದಲ್ಲಿ 2025ನೇ ಸಾಲಿನ SSLC ಮತ್ತು PUC 2ನೇ ವರ್ಷದ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸ್ತು ಪ್ರದರ್ಶನವು ಬೆಳಿಗ್ಗೆ 11ರಿಂದ ರಾತ್ರಿ 9ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ.

“ಸ್ಥಳೀಯ ಕಲೆ ಹಾಗೂ ಉದ್ಯಮಗಳಿಗೆ ಬೆಂಬಲ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ” ಎಂದು ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಹಾಗೂ ಉಪಾಧ್ಯಕ್ಷ ಭರತ್ ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.