
ಸಹಕಾರ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬೋಣ-ಸತೀಶ್
ದಿ. ಅಪ್ಪಣಗೌಡ ಪಾಟೀಲ್ ಅವರ ಕನಸಿನ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ ಸಂಕಲ್ಪ – ಸಚಿವ ಸತೀಶ್ ಜಾರಕಿಹೊಳಿ ಹುಕ್ಕೇರಿ –“ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಮತ್ತು ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಜನರ ನಿರೀಕ್ಷೆಯಂತೆ ಕಳೆದ ಮೂರು ದಶಕಗಳಲ್ಲಿ ಬೇಕಾದಷ್ಟು ಪ್ರಗತಿ ಕಾಣಲಿಲ್ಲ. ಮುಂದಿನ ದಿನಗಳಲ್ಲಿ ಈ ಸಹಕಾರಿ ಸಂಸ್ಥೆಗಳನ್ನು ಮತ್ತಷ್ಟು ಬಲಿಷ್ಠಗೊಳಿಸಿ ಅಭಿವೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವುದು ನಮ್ಮ ಗುರಿ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬಡಕುಂದ್ರಿ ಗ್ರಾಮದಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್…