
“2 ವರ್ಷ ಬಿಜೆಪಿಯವರ ಕೆಲಸವೇ ಆರೋಪ, ವಿರೋಧ” – ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: “ಕಾಂಗ್ರೆಸ್ ಸರ್ಕಾರ ಎಷ್ಟೇ ಮಹತ್ವದ ಕೆಲಸ ಮಾಡಿದರೂ, ಬಿಜೆಪಿಯವರು ವಿರೋಧಿಸುವುದೇ ಅವರ ಸ್ವಭಾವ. ಇನ್ನೂ ಎರಡೂ ವರ್ಷಗಳ ಕಾಲ ಆರೋಪ ಮಾಡುವುದು, ವಿರೋಧಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಟೀಕಿಸಿದರು. ಮಂಗಳವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಂದ ನಾಡಹಬ್ಬ ದಸರಾ ಉದ್ಘಾಟನೆ ನಡೆಯುತ್ತಿರುವುದು ರಾಜ್ಯಕ್ಕೆ ಹೆಮ್ಮೆ ವಿಚಾರ ಎಂದು ಹೇಳಿದರು. “ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ…