ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ
ಹುಕ್ಕೇರಿ:“ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಹಕಾರಿ ಚಿಂತನೆಗೆ ಜೀವ ತುಂಬಿದ ದಿ. ಅಪ್ಪಣಗೌಡ ಪಾಟೀಲ್ ಅವರ ದೂರದೃಷ್ಟಿಯಿಂದ ಹುಟ್ಟಿಕೊಂಡ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು, ರೈತರ ಮತ್ತು ಸಾಮಾನ್ಯರ ಅಭಿವೃದ್ಧಿಗೆ ನಿಂತ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಸಂಕೇಶ್ವರ ರಸ್ತೆಯ ನೇಸರಿ ಗಾರ್ಡನ್‌ನಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ 2025ರ ಚುನಾವಣೆಯ ಪೂರ್ವಭಾವಿ…

