
ಮಾಹಿತಿ ಆಯೋಗದ ರಾಜ್ಯ ಆಯುಕ್ತರಾಗಿ ಹಿರಿಯ ಪತ್ರಕರ್ತ ವಾಳ್ವೇಕರ
ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ, ಪ್ರಸ್ತುತ ವಿಧಾನ ಪರಿಷತ್ತಿನ ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಮಹೇಶ ವಾಳ್ವೇಕರ ನೇಮಕಗೊಂಡಿದ್ದಾರೆ. ಕಳೆದ ೨೪ ವರ್ಷಗಳಿಂದ ವಿದ್ಯುನ್ಮಾನ, ಬಾನುಲಿ ಹಾಗೂ ಮುದ್ರಣ ಮಾಧ್ಯಮದಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತ ಡಾ.ಮಹೇಶ ವಾಳ್ವೇಕರ್ ಕಳೆದ ೪ ವರ್ಷ ೯ ತಿಂಗಳಿನಿಂದ , ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ…