ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ
ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ.

ಈ ಸುಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಪರವಾಗಿ ಡಿಸಿಪಿ (ಕಾ & ಸು) ನಾರಾಯಣ ಬರಮಣಿ ರವರು ಸಂತಸ ವ್ಯಕ್ತಪಡಿಸಿ ಅಭಿನಂದನಾ ಪೂರ್ವಕವಾಗಿ ಸಂಶೋಧಕ ಡಾ:ರಾಜೇಂದ್ರ ಉದಯ ಬಡೇಸಗೋಳ ಇವರಿಗೆ ಈ ದಿವಸ ಮಾತೃ ಘಟಕದಲ್ಲಿ ಸತ್ಕಾರ ನೆರವೇರಿಸಿ ಸಂತಸ ವ್ಯಕ್ತಪಡಿಸಿ ಪ್ರೋತ್ಸಾಹಿಸಿದರು.

