ಮಹಾ ಸಿಎಂಗೆ ಆಹ್ವಾನ ಕೊಟ್ಟ ಹಾರನಹಳ್ಳಿ
ಮುಂಬಯಿ. ಬೆಂಗಳೂರಿನಲ್ಲಿ ಇದೇ 18 ಮತ್ತು 19 ರಂದು ಎರಡು ದಿನಗಳ ಕಾಲ ನಡೆಯಲಿರುವ ಆಖಿಲ ಕರ್ನಾಟಕ ಬ್ರಾಹ್ಮಣ ಸಮಾವೇಶಕ್ಕೆ ಎಲ್ಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿದ್ದತೆಯಲ್ಲಿ ತೊಡಗಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ರಾಜನಾಥ ಸಿಂಗ್, ಪ್ರಲ್ಹಾದ ಜೋಶಿ, ಬಿ.ಎಲ್. ಸಂತೋಷ ಸೇರಿದಂತೆ ಇನ್ನೂ ಹಲವಾರು ಗಣ್ಯಾತಿ ಗಣ್ಯರಿಗೆ ಖುದ್ದು ಭೆಟ್ಡಿಯಾಗಿ ಆಮಂತ್ರಣ ಕೊಟ್ಡು ಬಂದಿದ್ದಾರೆ. ಇಂದು ಬೆಳಿಗ್ಗೆ ಮುಂಬಯಿಗೆ…

