24×7 ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗೆ ಚಾಲನೆ

ಶಾಸಕ ಅಭಯ ಪಾಟೀಲ ಮಾರ್ಗದರ್ಶನ – ವಾರ್ಡ್ 43ರಲ್ಲಿ ಹೊಸ ನೀರು ವ್ಯವಸ್ಥೆ.

ಮಾರ್ಚ್ 13ರಂದು ಸಂಜೆ 5.30ಕ್ಕೆ ಚಿದಂಬರೇಶ್ವರ ದೇವಸ್ಥಾನ ಆವರಣದಲ್ಲಿ ಕಾರ್ಯಕ್ರಮ

ಬೆಳಗಾವಿ:

ನಗರದ ವಾರ್ಡ್ ನಂ.43ರ ನಿವಾಸಿಗಳಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ 24×7 ನೀರು ಸರಬರಾಜು ವ್ಯವಸ್ಥೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ನಾಗರಿಕರಿಗೆ ವರ್ಷಗಳಿನಿಂದ ಎದುರಾಗುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಶಾಸಕ ಅಭಯ ಪಾಟೀಲ ಅವರ ಮಾರ್ಗದರ್ಶನದಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ವಾರ್ಡ್ ನಿವಾಸಿಗಳಿಗೆ ದಿನದ 24 ಗಂಟೆಗಳ ಕಾಲ ಶುದ್ಧ ಕುಡಿಯುವ ನೀರು ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಯೋಜನೆಯ ಭಾಗವಾಗಿ ನಗರದ ಚಿದಂಬರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಿ, ಮನೆಗಳಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ನೀರಿನ ಕೊರತೆ ಹಾಗೂ ಅಸ್ಥಿರ ಸರಬರಾಜು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕಾರ್ಯಕ್ರಮವನ್ನು ಮಾರ್ಚ್ 13ರಂದು ಸಂಜೆ 5.30ಕ್ಕೆ ಚಿದಂಬರೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಹಾಗೂ ವಾರ್ಡ್ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಉಪಮೇಯರ್ ವಾಣಿ ಜೋಶಿ ಮನವಿ ಮಾಡಿದ್ದಾರೆ.
ಈ ಯೋಜನೆಯಿಂದ ವಾರ್ಡ್ 43ರಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಬಹುಮಟ್ಟಿಗೆ ಪರಿಹಾರ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!