
ಬೆಳಗಾವಿ ಬ್ರಾಹ್ಮಣ ಸಮಾಜ ಟ್ರಸ್ಟ್‌ನಿಂದ ಅರ್ಜಿ ಆಹ್ವಾನ.
ಬೆಳಗಾವಿ:
ಬೆಳಗಾವಿ ಜಿಲ್ಲೆಯಲ್ಲೇ ವಿದ್ಯಾಭ್ಯಾಸ ಮಾಡುತ್ತಿರುವ, 10ನೇ ಹಾಗೂ 12ನೇ ತರಗತಿ ಪರೀಕ್ಷೆಯಲ್ಲಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಬ್ರಾಹ್ಮಣ ಸಮಾಜದ ಆರ್ಥಿಕವಾಗಿ ಅಗತ್ಯವಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಉದ್ದೇಶದಿಂದ ಬೆಳಗಾವಿ ಬ್ರಾಹ್ಮಣ ಸಮಾಜ ಟ್ರಸ್ಟ್ ಪ್ರತಿವರ್ಷದಂತೆ ಈ ವರ್ಷವೂ ಸ್ಕಾಲರ್ ಶಿಪ್ ಘೋಷಿಸಿದೆ.

ವಿದ್ಯಾಭ್ಯಾಸ ಮುಂದುವರಿಸಲು ಆರ್ಥಿಕ ಅಡಚಣೆ ಎದುರಿಸುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಆಸಕ್ತ ವಿದ್ಯಾರ್ಥಿಗಳು ಹಾಗೂ ಪಾಲಕರು ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್‌ನ ಪದಾಧಿಕಾರಿಗಳನ್ನು 20-05-2026 ರೊಳಗಾಗಿ ಸಂಪರ್ಕಿಸಬೇಕೆಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಭರತ ದೇಶಪಾಂಡೆ, ಉಪಾಧ್ಯಕ್ಷ – 9480687580
ವಿಲಾಸ ಬಾದಾಮಿ, ಕಾರ್ಯದರ್ಶಿ – 9880291605
ರಮೇಶ ಕುಲಕರ್ಣಿ, ಖಜಾಂಚಿ – 9448304236
ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಬಲ ತುಂಬುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಯೋಜನೆಯ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಟ್ರಸ್ಟ್ ಮನವಿ ಮಾಡಿದೆ.

