ನೀರಾವರಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ
ನೀರಾವರಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ ಬೆಳಗಾವಿ, ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಹನಿ ನೀರಾವರಿ, ಏತ ನೀರಾವರಿ, ಕೆರೆ ತುಂಬುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಬೇಕು. ನೆನೆಗುದಿಗೆ ಬಿದ್ದಿರುವ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ನಿಗದಿತ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಜು.೮) ಜರುಗಿದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಡಿ ಬರುವ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

